alex Certify BIG NEWS: ಮತ್ತೆ ಏರಿಕೆಯಾಯ್ತು ಕೊರೊನಾ ಸೋಂಕಿತರ ಸಂಖ್ಯೆ; ಮಹಾಮಾರಿಗೆ ಒಂದೇ ದಿನ 5 ಜನರು ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೆ ಏರಿಕೆಯಾಯ್ತು ಕೊರೊನಾ ಸೋಂಕಿತರ ಸಂಖ್ಯೆ; ಮಹಾಮಾರಿಗೆ ಒಂದೇ ದಿನ 5 ಜನರು ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಕೊಂಚ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 200 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಅಲ್ಲದೇ ಕಳೆದ 24 ಗಂಟೆಯಲ್ಲಿ 5 ಜನರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 530663 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 3767 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 44141017 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 59,327 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,98,82,753 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,17,735 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...