alex Certify BIG NEWS: ಮತ್ತೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸ್ತಾರಾ ಸಿದ್ದರಾಮಯ್ಯ…? ಗೊಂದಲಕ್ಕೆ ತೆರೆ ಎಳೆದ ವಿಪಕ್ಷ ನಾಯಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸ್ತಾರಾ ಸಿದ್ದರಾಮಯ್ಯ…? ಗೊಂದಲಕ್ಕೆ ತೆರೆ ಎಳೆದ ವಿಪಕ್ಷ ನಾಯಕ

ಮಂಡ್ಯ: ಮುಂಬರುವ ವಿಧಾನಸಭಾ ಚುನಾವಣೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಮತ್ತೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಸಾಧ್ಯತೆ ದಟ್ಟವಾಗಿದೆ ಎಂಬ ಚರ್ಚೆ ನಡೆದಿತ್ತು. ಇದೀಗ ಈ ಗೊಂದಲ, ಊಹಾಪೋಹಗಳಿಗೆ ಸ್ವತಃ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ.

ಮುಂದಿನ ಚುನಾವಣೆಯಲ್ಲಿ ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿಲ್ಲ. ಈ ಬಗ್ಗೆ ಯಾವುದೇ ಗೊಂದಲಗಳು ಬೇಡ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

BIG NEWS: ಪಿಯು ವಿದ್ಯಾರ್ಥಿ ನಾಪತ್ತೆ; ಅಪಹರಣ ಶಂಕೆ

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲ್ಲ. ನನಗೆ ನಾಲ್ಕೈದು ಕ್ಷೇತ್ರಗಳಿಂದ ಸ್ಪರ್ಧಿಸುವಂತೆ ಆಹ್ವಾನ ಬಂದಿದೆ. ಆದರೆ ನಾನು ಎಲ್ಲಿ ನಿಲ್ಲಬೇಕು ಎಂಬ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ ಎಂದರು.

ಇನ್ನು ಜಿ.ಟಿ.ದೇವೇಗೌಡ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಅವರೊಂದಿಗೆ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...