ಬೆಂಗಳೂರು: ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಮತ್ತೆ ಪ್ರಸ್ತಾವನೆ ಬಂದಿರುವುದಾಗಿ ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಾಲಿನ ದರ ಹೆಚ್ಚಿಸಬೇಕು ಎಂದು 14 ಹಾಲು ಉತ್ಪಾದಕರ ಸಂಘಗಳು ಮನವಿ ಮಾಡಿವೆ. ದರ ಹೆಚ್ಚಿಸಿದರೆ ರೈತರಿಗೆ ಹಣ ನೀಡುವುದಾಗಿ ಉತ್ಪಾದಕ ಸಂಘಟನೆಗಳು ಹೇಳಿವೆ ಎಂದು ತಿಳಿಸಿದರು.
ಆದರೆ ಗ್ರಾಹಕರು ಹಾಲಿನ ದರ ಹೆಚ್ಚಳ ಮಾಡದಂತೆ ಒತ್ತಡ ಹಾಕುತ್ತಿದ್ದಾರೆ. ಈ ಬಗ್ಗೆ ಸಿಎಂ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.