alex Certify BIG NEWS: ಮತ್ತೊಂದು ದುರಂತ; ಮದುವೆಗೆಂದು ಹೊರಟ ಕುಟುಂಬ; ಭೀಕರ ಅಪಘಾತಕ್ಕೆ ಮಹಿಳೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೊಂದು ದುರಂತ; ಮದುವೆಗೆಂದು ಹೊರಟ ಕುಟುಂಬ; ಭೀಕರ ಅಪಘಾತಕ್ಕೆ ಮಹಿಳೆ ಬಲಿ

ಕಾರವಾರ: ಸಂಬಂಧಿಕರ ಮದುವೆಗೆಂದು ಕಾರಿನಲ್ಲಿ ತೆರಳುತ್ತಿದ್ದ ಕುಟುಂಬ ಅಪಘಾತಕ್ಕೀಡಾಗಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದಿದೆ.

ಮದುವೆಗೆಂದು ಕುಟುಂಬ ಸಮೇತರಾಗಿ ಹೊರಟಿದ್ದರು. ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಕಾರಿಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಂಕೋಲಾದ ಮಾದನಗೇರಿಯಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...