ಚಿಕ್ಕಬಳ್ಳಾಪುರ: ಬೈಕ್ ಗೆ ಜೀಪ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿ ಹೆದ್ದಾರಿಯಲ್ಲಿ ನಡೆದಿದೆ.
ಬಾಗೇಪಲ್ಲಿ ಹೆದ್ದಾರಿ 44ರಲ್ಲಿ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಗೆ ಹಿಂಬದಿಯಿಂದ ಬೊಲೆರೊ ಜೀಪ್ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದರೆ ಇನ್ನೋರ್ವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೃತರನ್ನು ಲಕ್ಷ್ಮಿನಾರಾಯಣ ಹಾಗೂ ರಾಜೇಶ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.