ಪಣಜಿ: ಗೋವಾಗೆ ಪ್ರವಾಸ ತೆರಳಿದ್ದ ಕಾರೊಂದು ರಾಜ್ಯಕ್ಕೆ ವಾಪಸ್ ಆಗುತ್ತಿದ್ದಾಗ ಭೀಕರ ಅಪಘಾತಕ್ಕೀಡಾಗಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗೋವಾದ ಮಾಪಸಾದ ಕುಚೇಲಿ ಬಳಿ ಸಂಭವಿಸಿದೆ.
ಬೆಳಗಾವಿ ಜಿಲ್ಲೆಯ ನಾಲ್ವರು ಗೋವಾಗೆ ಪ್ರವಾಸ ತೆರಳಿದ್ದರು. ನಿನ್ನೆ ರಾತ್ರಿ ಗೋವಾದಿಂದ ವಾಪಸ್ ಆಗುತ್ತಿದ್ದ ವೇಳೆ ಇಂದು ಮುಂಜಾನೆ ಮಾಪಸಾದ ಕುಚೇಲಿ ಎಂಬಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಹೊಡೆದಿದೆ. ಪರಿಣಾಮ ಮೂವರು ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
ಪ್ರಧಾನಿ ನರೇಂದ್ರ ಮೋದಿ ಅವರ ರಾತ್ರಿ ಪ್ರಯಾಣದ ಹಿಂದಿದೆ ಈ ಕಾರಣ
ನಾಯರ್ ಅನಗೋಳ್ಕರ್, ರೋಹನ್, ಸನ್ನಿ ಅನ್ವೇಕರ್ ಮೃತರು. ವಿಶಾಲ್ (27) ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಡಿದ ಮತ್ತಿನಲ್ಲಿ ಕಾರು ಚಲಾಯಿಸುತ್ತಿದ್ದುದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.