alex Certify BIG NEWS: ಮತ್ತೊಂದು ಭೀಕರ ಬೈಕ್ ಅಪಘಾತ; ಫ್ಲೈ ಓವರ್ ನಿಂದ ಬಿದ್ದು ವ್ಯಕ್ತಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೊಂದು ಭೀಕರ ಬೈಕ್ ಅಪಘಾತ; ಫ್ಲೈ ಓವರ್ ನಿಂದ ಬಿದ್ದು ವ್ಯಕ್ತಿ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಫ್ಲೈ ಓವರ್ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.

ಆಂಧ್ರಪ್ರದೇಶ ಮೂಲದ ಆಗಾರ್ಜುನ (33) ಮೃತ ವ್ಯಕ್ತಿ. ಬೆಂಗಳೂರಿನಿಂದ ಹೊಸೂರು ಕಡೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ತಡೆ ಗೋಡೆಗೆ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ಫ್ಲೈಓವರ್ ಮೇಲಿನಿಂದ ಕೆಳಗೆ ಬಿದ್ದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...