alex Certify BIG NEWS: ಮತ್ತೊಂದು ಮಂಕಿ ಪಾಕ್ಸ್ ಪ್ರಕರಣ ದೃಢ; 22 ವರ್ಷದ ಯುವತಿಯಲ್ಲಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೊಂದು ಮಂಕಿ ಪಾಕ್ಸ್ ಪ್ರಕರಣ ದೃಢ; 22 ವರ್ಷದ ಯುವತಿಯಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಮಂಕಿ ಪಾಕ್ಸ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇದೀಗ ಮತ್ತೊಂದು ಪ್ರಕರಣ ಪತ್ತೆಯಾಗಿದೆ.

ಇದು ದೆಹಲಿಯಲ್ಲಿ ಪತ್ತೆಯಾದ 5ನೇ ಪ್ರಕರಣವಾಗಿದ್ದು, 22 ವರ್ಷದ ಯುವತಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಲೋಕನಾಯಕ್ ಜಯಪ್ರಕಾಶ್ ನಾರಾಯಣ್ ಆಸ್ಪತ್ರೆ ವೈದ್ಯ ಡಾ. ಸುರೇಶ್ ಕುಮಾರ್ ತಿಳಿಸಿದ್ದಾರೆ.

ನೈಜೀಯಾದಿಂದ ಬಂದಿದ್ದ ಯುವತಿಯಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದ ಕಾರಣ ಮಾದರಿಯನ್ನು ಲ್ಯಾಬ್ ಗೆ ಕಳುಹಿಸಲಾಗಿತ್ತು. ಆಕೆ ಆರೋಗ್ಯದ ಮೇಲೆ ನಿಗಾ ವಹಿಸಲಾಗಿತ್ತು. ಇದೀಗ ವರದಿಯಲ್ಲಿ ಸೋಂಕು ದೃಢಪಟ್ಟಿದೆ. ಯುವತಿಗೆ ಚಿಕಿತ್ಸೆ ಮುಂದುವರೆದಿದ್ದು, ಆಕೆಯ ಸಂಪರ್ಕದಲ್ಲಿರುವವರನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...