ಮಂಗಳೂರು: ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನದ ಬೆನ್ನಲ್ಲೇ ಕಡಲನಗರಿ ಮಂಗಳೂರಿನಲ್ಲಿಯೂ ಮತ್ತೋರ್ವ ಶಂಕಿತ ಉಗ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅನ್ಸರ್ ಎಂಬಾತನನ್ನು ವಶಕ್ಕೆ ಪಡೆದಿರುವ ಮಂಗಳೂರು ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಶರೀಕ್ ಹಾಗೂ ನಾಪತ್ತೆಯಾಗಿರುವ ಇನ್ನೋರ್ವ ಶಂಕಿತ ಮುನೀರ್ ಅಹ್ಮದ್ ಜೊತೆ ಅನ್ವರ್ ನಂಟು ಹೊಂದಿದ್ದ ಎನ್ನಲಾಗಿದೆ.
ಅನ್ವರ್ ನನ್ನು ವಶಕ್ಕೆ ಪಡೆದಿರುವ ಪೊಲೀಸರು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.