ಬೆಳಗಾವಿ: ಕೆಲದಿನಗಳಿಂದ ಸುಮ್ಮನಾಗಿದ್ದ ಎಂಇಎಸ್ ಪುಂಡರು ಇದೀಗ ಬೆಳಗಾವಿಯಲ್ಲಿ ಮತ್ತೆ ಪುಂಡಾಟ ಮೆರೆದಿದ್ದಾರೆ. ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ದಾಂಧಲೆ ನಡೆಸಿರುವ ಘಟನೆ ಧಾಮನೆ ಗ್ರಾಮದಲ್ಲಿ ನಡೆದಿದೆ.
ಧಾಮನೆ ಗ್ರಾಮದಲ್ಲಿ ನಿನ್ನೆ ರಾತ್ರಿ ಮದುವೆ ಸಮಾರಂಭ ನಡೆದಿದ್ದು, ಬ್ಯಾಂಡ್ ಹಾಕಿ ವಧು-ವರರನ್ನು ಅದ್ಧೂರಿಯಾಗಿ ಮೆರವಣಿಗೆ ಮಾಡಲಾಗುತ್ತಿತ್ತು. ಮೆರವಣಿಗೆಯಲ್ಲಿ ಕನ್ನಡ ಧ್ವಜ ಹಿಡಿದು ಕರುನಾಡೇ ಹಾಡು ಹಾಕಿ ಹಲವರು ಡ್ಯಾನ್ಸ್ ಮಾಡುತ್ತಿದ್ದರು. ಈ ವೇಳೆ ದಾಳಿ ನಡೆಸಿರುವ ಎಂಇಎಸ್ ಕಾರ್ಯಕರ್ತರು ವಧು-ವರರು ಹಾಗೂ ಮೆರವಣಿಗೆಯಲ್ಲಿ ಭಾಗಿಯಾದವರ ಮೇಲೆ ಹಲ್ಲೆ ನಡೆಸಿದ್ದಾರೆ.
ಕನ್ನಡ ಹಾಡು ಹಾಕಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ.