alex Certify BIG NEWS: ಮದುವೆ ಮೆರವಣಿಗೆಯಲ್ಲಿ ಕನ್ನಡದ ಹಾಡು; ಎಂಇಎಸ್ ನಿಂದ ದಾಂಧಲೆ; ವಧು-ವರರ ಮೇಲೆ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮದುವೆ ಮೆರವಣಿಗೆಯಲ್ಲಿ ಕನ್ನಡದ ಹಾಡು; ಎಂಇಎಸ್ ನಿಂದ ದಾಂಧಲೆ; ವಧು-ವರರ ಮೇಲೆ ಹಲ್ಲೆ

ಬೆಳಗಾವಿ: ಕೆಲದಿನಗಳಿಂದ ಸುಮ್ಮನಾಗಿದ್ದ ಎಂಇಎಸ್ ಪುಂಡರು ಇದೀಗ ಬೆಳಗಾವಿಯಲ್ಲಿ ಮತ್ತೆ ಪುಂಡಾಟ ಮೆರೆದಿದ್ದಾರೆ. ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ದಾಂಧಲೆ ನಡೆಸಿರುವ ಘಟನೆ ಧಾಮನೆ ಗ್ರಾಮದಲ್ಲಿ ನಡೆದಿದೆ.

ಧಾಮನೆ ಗ್ರಾಮದಲ್ಲಿ ನಿನ್ನೆ ರಾತ್ರಿ ಮದುವೆ ಸಮಾರಂಭ ನಡೆದಿದ್ದು, ಬ್ಯಾಂಡ್ ಹಾಕಿ ವಧು-ವರರನ್ನು ಅದ್ಧೂರಿಯಾಗಿ ಮೆರವಣಿಗೆ ಮಾಡಲಾಗುತ್ತಿತ್ತು. ಮೆರವಣಿಗೆಯಲ್ಲಿ ಕನ್ನಡ ಧ್ವಜ ಹಿಡಿದು ಕರುನಾಡೇ ಹಾಡು ಹಾಕಿ ಹಲವರು ಡ್ಯಾನ್ಸ್ ಮಾಡುತ್ತಿದ್ದರು. ಈ ವೇಳೆ ದಾಳಿ ನಡೆಸಿರುವ ಎಂಇಎಸ್ ಕಾರ್ಯಕರ್ತರು ವಧು-ವರರು ಹಾಗೂ ಮೆರವಣಿಗೆಯಲ್ಲಿ ಭಾಗಿಯಾದವರ ಮೇಲೆ ಹಲ್ಲೆ ನಡೆಸಿದ್ದಾರೆ.

ಕನ್ನಡ ಹಾಡು ಹಾಕಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...