ಚಿಕ್ಕಬಳ್ಳಾಪುರ: ಸತ್ಯಸಾಯಿ ಆಶ್ರಮದ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.
ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿರುವ ಸತ್ಯಸಾಯಿ ಆಶ್ರಮದ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ಪ್ರಧಾನಿ ಮೋದಿ ಚಾಲನೆ ನೀಡಿದರು.
ಇದಕ್ಕೂ ಮುನ್ನ ಪ್ರಧಾನಿ ಮೋದಿ ಸರ್.ಎಂ.ವಿಶ್ವೇಶ್ವರಯ್ಯನವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಸುಧಾಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.