ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ಇಂದು ದೇಶಾದ್ಯಂತ ಬೃಹತ್ ಕೋವಿಡ್ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಮಧ್ಯಾಹ್ನದ ವೇಳೆಗೆ ಬರೋಬ್ಬರಿ 1 ಕೋಟಿ ಜನರಿಗೆ ಲಸಿಕೆ ಹಾಕಲಾಗಿದೆ. ಈ ಮೂಲಕ ದೇಶದಲ್ಲಿ ಹೊಸ ದಾಖಲೆ ಬರೆಯಲಾಗಿದೆ.
ಇಂದು ದೇಶಾದ್ಯಂತ 1 ಕೋಟಿ ಕೋವಿಡ್ ಲಸಿಕೆ ನೀಡಲಾಗಿದೆ. ಇದರೊಂದಿಗೆ ಭಾರತ ವಿಶ್ವದಲ್ಲೇ ಅತಿದೊಡ್ಡ ವ್ಯಾಕ್ಸಿನೇಷನ್ ಅಭಿಯಾನದ ಸಾಧನೆ ಮಾಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಜನ್ಮದಿನದ ಪ್ರಯುಕ್ತ ಸಮುದ್ರ ಚಿಪ್ಪುಗಳಲ್ಲಿ ನಿರ್ಮಾಣವಾಯ್ತು ಮರಳುಶಿಲ್ಪ
ಸಂಜೆವರೆಗೂ ಕೋವಿಡ್ ಲಸಿಕಾ ಅಭಿಯಾನ ನಡೆಯಲಿದ್ದು, ಸಂಜೆ ವೇಳೆಗೆ 2 ಕೋಟಿ ಉದ್ದೇಶಿತ ಲಸಿಕೆ ಗುರಿ ಹೊಂದಲಾಗಿದೆ.