ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಮೃತ ಮಹೋತ್ಸವ ಆಚರಿಸಲು ಸಜ್ಜಾಗಿರುವ ಕಾಂಗ್ರೆಸ್ ನಾಯಕರ ನಡೆಗೆ ಸಚಿವ ಬಿ.ಸಿ.ಪಾಟೀಲ್ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ಮನುಷ್ಯರು ಬದುಕಿದ್ದಾಗ ಯಾರಾದ್ರೂ ಉತ್ಸವ ಮಾಡ್ತಾರಾ? ದೇವರ ಉತ್ಸವ ಮಾಡುವುದನ್ನು ನೋಡಿದ್ದೇವೆ. ಕೇಳಿದ್ದೇವೆ. ಆದರೆ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಅವರ ಉತ್ಸವ ಮಾಡಲು ಹೊರಟಿದ್ದಾರೆ ಇದ್ಯಾವ ರೀತಿ ಆಚರಣೆ…? ಎಂದು ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಅತಿವೃಷ್ಠಿಯಿಂದ ಜನರು ಕಂಗಾಲಾಗಿದ್ದಾರೆ. ಹಲವೆಡೆ ಪ್ರವಾಹ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ವಿಪಕ್ಷ ನಾಯಕ, ಮಾಜಿ ಸಿಎಂ ಆಗಿದ್ದವರು ಇಷ್ಟು ದೊಡ್ಡಮಟ್ಟದಲ್ಲಿ ಹುಟ್ಟುಹಬ್ಬ ಆಚರಣೆ ಎಂದು ಸಿದ್ದರಾಮೋತ್ಸವ ಮಾಡಿಕೊಳ್ಳಲು ಹೊರಟಿರುವುದು ಸರಿಯಲ್ಲ ಎಂದರು.