ಮನೆಗೆಳಿಗೆ ಬೆಂಕಿ ತಗುಲಿದ ಪರಿಣಾಮ 8 ಮಂದಿ ಸಜೀವ ದಹನವಾದ ಘಟನೆಯು ಪಶ್ಚಿಮ ಬಂಗಾಳದ ಭಿರ್ಭೂಮ್ ಜಿಲ್ಲೆಯ ರಾಮ್ಪುರಹತ್ನಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ನಿನ್ನೆ ಮುಂಜಾನೆ ತೃಣಮೈಲ ಕಾಂಗ್ರೆಸ್ನ ಪಂಚಾಯ್ತಿ ಮಟ್ಟದ ನಾಯಕನ ಹತ್ಯೆ ನಡೆದ ಬಳಿಕ ಈ ಘಟನೆ ನಡೆದಿದೆ ಎಂದು ಡಿಜಿಪಿ ಮನೋಜ್ ಮಾಳವಿಯಾ ಕೋಲ್ಕತ್ತಾದಲ್ಲಿ ಮಾಹಿತಿ ನೀಡಿದ್ದಾರೆ. ಬೆಂಕಿಗಾಹುತಿಯಾಗಿದ್ದ ಮನೆಯೊಂದರಿಂದ ಏಳು ಸುಟ್ಟು ದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಗಾಯಗೊಂಡಿರುವ ವ್ಯಕ್ತಿಯು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಮಾಳವಿಯಾ ಹೇಳಿದರು.
ಪರಿಸ್ಥಿತಿಯು ಈಗ ನಿಯಂತ್ರಣದಲ್ಲಿದೆ, ನಿನ್ನೆ ರಾತ್ರಿಯಿಂದ ಗ್ರಾಮದಲ್ಲಿ ಪೊಲೀಸ್ ತಂಡವನ್ನು ನಿಯೋಜಿಸಿದ್ದೇವೆ. ಮನೆಗಳಿಗೆ ಹೇಗೆ ಬೆಂಕಿ ಹೊತ್ತಿಕೊಂಡಿದೆ ಹಾಗೂ ಈ ಅವಘಡಕ್ಕೂ ಮತ್ತು ಪಂಚಾಯತ್ ಉಪಾಧ್ಯಕ್ಷರ ಸಾವಿಗೂ ಏನಾದರೂ ಸಂಬಂಧವಿದೆಯೇ ಎಂಬುದರ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಮಾಳವಿಯಾ ಹೇಳಿದ್ದಾರೆ.