ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮನೆ ಮೇಲೆ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣ್ಣಿನಡಿ ಇಬ್ಬರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಭಟ್ಕಳದ ಮುಟ್ಟಳ್ಳಿ ಗ್ರಾಮದಲ್ಲಿ ಭಾರಿ ಮಳೆಯಿಂದಾಗಿ ಇಂದು ಬೆಳಗಿನ ಜಾವ ಮನೆ ಮೇಲೆ ಗುಡ್ಡ ಕುಸಿದಿದ್ದು, ಮನೆ ಸಂಪೂರ್ಣವಾಗಿ ನೆಲಸಮವಾಗಿದೆ. ಘಟನೆಯ ವೇಳೆ ಕುಟುಂಬದ ನಾಲ್ವರು ಮನೆಯಲ್ಲಿದ್ದರು. ಮಣ್ಣಿನಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ.
ಮನೆಯಲ್ಲಿದ್ದ ನಾಲ್ವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮಣ್ಣು ತೆರವು ವೇಳೆ ಇದೀಗ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.