ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದಲ್ಲಿ ಮನ್ ಮುಲ್ ಮೆಗಾ ಡೇರಿಯನ್ನು ಉದ್ಘಾಟನೆ ಮಾಡಿದರು.
260 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಹಾಲಿನ ಡೇರಿ, ಹಾಲಿನ ಪೌಡರ್ ಉತ್ಪಾದನಾ ಘಟಕ ಇದಾಗಿದ್ದು, ರಾಜ್ಯದ ಎರಡನೆ ಅತಿದೊಡ್ಡ ಡೇರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಟ್ಟಡದ ಹೊರ ಭಾಗದಲ್ಲಿ 4 ಬೃಹತ್ ಹಾಲು ಸಂಗ್ರಹಣಾ ಟ್ಯಾಂಕ್ ಇದ್ದು, ತಲಾ ಒಂದೂವರೆ ಲಕ್ಷ ಲೀಟರ್ ಹಾಲು ಸಂಗ್ರಹ ಸಾಮರ್ಥ್ಯ ಹೊಂದಿದೆ.
ಸುಮಾರು 5 ಎಕರೆಯಲ್ಲಿ ನಿರ್ಮಾಣವಾಗಿರುವ ಬೃಹತ್ ಡೇರಿಯನ್ನು ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಿದರು. ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಆದಿಚುಂಚನಗಿರಿ ನಿರ್ಮಲಾನಂದ ಸ್ವಾಮೀಜಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ಎಸ್.ಟಿ.ಸೋಮಶೇಖರ್, ನಾರಾಯಣಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.