ಬೆಂಗಳೂರು: ಇವರ ರಾಷ್ಟ್ರೀಯ ಕಾಂಗ್ರೆಸ್ ನಲ್ಲಿ ಕೇವಲ ಡಿ.ಕೆ. ಶಿವಕುಮಾರ್ ಮಾತ್ರ ಉಗ್ರರ ಬೆಂಬಲಿಗ ಎಂದುಕೊಂಡರೆ ಅದು ತಪ್ಪಾಗುತ್ತದೆ. ಉಗ್ರ ಬೆಂಬಲಿಗ ಡಿಕೆಶಿ ಬೆಂಬಲಕ್ಕೆ ಮರಿ ಖರ್ಗೆಯೂ ನಿಂತಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಇಡೀ ಕಾಂಗ್ರೆಸ್ಸೇ ಒಟ್ಟಾಗಿ ಉಗ್ರರ ಪರ ಮೇಣದ ಬತ್ತಿಯ ಮೆರವಣಿಗೆ ಮಾಡಿದರೂ ಅಚ್ಚರಿಯೇನಿಲ್ಲ ಎಂದು ರಾಜ್ಯ ಬಿಜೆಪಿ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದೆ.
ಕಾಂಗ್ರೆಸ್ ಇದುವರೆಗೂ ಒಮ್ಮೆಯಾದರೂ ದೇಶದ ಪರವಾಗಿ ನಿಂತಿದೆಯಾ ಎಂದು ನೋಡಿದರೆ ಒಮ್ಮೆಯೂ ಇಲ್ಲ!
* ಸರ್ಜಿಕಲ್ ಸ್ಟ್ರೈಕ್ಗೆ ಸಾಕ್ಷಿ ಕೇಳಿದ್ರು
* ಯೋಧರ ಸಾಮರ್ಥ್ಯ ಪ್ರಶ್ನಿಸಿದ್ರು
* ಚೀನಾ ಜೊತೆ ವ್ಯವಹಾರ ಮಾಡಿದ್ರು
* ವಿದೇಶದಲ್ಲಿ ಭಾರತವನ್ನು ತೆಗಳಿದ್ರು
ಇಂಥವರಾ ದೇಶದ ಚುಕ್ಕಾಣಿ ಹಿಡಿಯ ಹೊರಟವರು?
ದೇಶದ ಭದ್ರತೆಯ ವಿಚಾರದಲ್ಲೂ ಗಟ್ಟಿಯಾಗಿ ನಾವು ದೇಶದ ಪರ, ಉಗ್ರನನ್ನು ಬೆಂಬಲಿಸುವ ದರ್ದು ನಮಗೆ ಬಂದಿಲ್ಲ ಎಂದು ಹೇಳಲೂ ಆಗದ ಜನತಾ ದಳ ಕಾಂಗ್ರೆಸ್ ನ ಬಿ ತಂಡವಲ್ಲದೇ ಇನ್ನೇನು? ಮತದಾರರು ನಿರ್ಧರಿಸಿದ್ದಾರೆ, ಉಗ್ರರ ವಿರುದ್ಧ ಕ್ರಮ ಕೈಗೊಳ್ಳುವ ಬಿಜೆಪಿ ಸರ್ಕಾರವನ್ನು ಮತ್ತೊಮ್ಮೆ ಬೆಂಬಲಿಸಲು. ಹಾಗೇ, ಉಗ್ರರನ್ನು ಬೆಂಬಲಿಸುವ ಕಾಂಗ್ರೆಸ್’ಗೆ ಮುಂದಿನ ಚುನಾವಣೆಯಲ್ಲಿ ತಕ್ಕ ಶಾಸ್ತಿ ಮಾಡಲಿದ್ದಾರೆ ಎಂದು ಸರಣಿ ಟ್ವೀಟ್ ಮಾಡಿದೆ.