ಬೆಂಗಳೂರು: ವಿಧಾನಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನವೇ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಗರಿಗೆದರಿದ್ದು, ಕಾಂಗ್ರೆಸ್ ನಾಯಕರು ಗೆಲುವಿನ ಉತ್ಸಾಹದಲ್ಲಿ ಸಭೆ ಮೇಲೆ ಸಭೆ ನಡೆಸಿದ್ದಾರೆ.
ಬೆಂಗಳೂರಿನ ಸದಾಶಿವ ನಗರದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಹೈವೋಲ್ಟೇಜ್ ಮಿಟಿಂಗ್ ನಡೆದಿದೆ. ಬೆಳಿಗ್ಗೆ ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದ ಬೆನ್ನಲ್ಲೇ ಈಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖರ್ಗೆ ನಿವಾಸಕ್ಕೆ ತೆರಳಿದ್ದು, ಮಹತ್ವದ ಸಭೆ ನಡೆಸಿದ್ದಾರೆ.
ರಾಜ್ಯ ಕಾಂಗ್ರೆಸ್ ನಾಯಕರು ಖರ್ಗೆ ನಿವಾಸದಲ್ಲಿ ಸರಣಿ ಸಭೆಗಳನ್ನು ನಡೆಸಿದ್ದು, ಸರ್ಕಾರ ರಚನೆ ಕಸರತ್ತು, ಅತಂತ್ರ ಸ್ಥಿತಿ ಉದ್ಭವವಾದರೆ ಮುಂದಿನ ರಣತಂತ್ರ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.