alex Certify BIG NEWS: ಮಳವಳ್ಳಿಯಲ್ಲಿ ಬಾಲಕಿ ರೇಪ್ & ಮರ್ಡರ್ ಕೇಸ್; ಕುಂಭಮೇಳ ಸಮಾರೋಪದಲ್ಲಿ ಭಾವುಕರಾದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಳವಳ್ಳಿಯಲ್ಲಿ ಬಾಲಕಿ ರೇಪ್ & ಮರ್ಡರ್ ಕೇಸ್; ಕುಂಭಮೇಳ ಸಮಾರೋಪದಲ್ಲಿ ಭಾವುಕರಾದ ಸಿಎಂ

ಮಂಡ್ಯ: ಮಳವಳ್ಳಿಯಲ್ಲಿ ನಡೆದ ಬಾಲಕಿ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಅಂದೇ ನಾನು ಸೂಚಿಸಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಕುಂಭಮೇಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಬಾಲಕಿ ಅತ್ಯಾಚಾರ ಹಾಗೂ ಹತ್ಯೆ ಅಮಾನುಷವಾದ ಕೃತ್ಯ. ಮನುಷತ್ವವಿಲ್ಲದವರು ಮಾತ್ರ ಹೀಗೆ ಮಾಡಲು ಸಾಧ್ಯ. ಆ ಕಂದಮ್ಮಳ ಪರಿಸ್ಥಿತಿ ನೋಡಿದರೆ ಕರುಳು ಕಿತ್ತು ಬರುತ್ತೆ ಎಂದು ಭಾವುಕರಾದರು.

ಅಂದೇ ನಾನು ಪೊಲೀಸ್ ಇಲಾಖೆಗೆ, ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ. ಪ್ರಕರಣ ಗಂಭೀರವಾಗಿ ಪರಿಗಣಿಸಿ. ಬರಿ ಚಾರ್ಜ್ ಶೀಟ್ ಹಾಕುವುದಲ್ಲ. ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು. ಪೊಲೀಸ್ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ. ಸಮಾಜಕ್ಕೆ ಇದೊಂದು ಪಾಠವಾಗುವಂತೆ ಆರೋಪಿಗೆ ಉಗ್ರ ಶಿಕ್ಷೆ ನೀಡುತ್ತೇವೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...