ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಜನ ತತ್ತರಿಸಿ ಹೋಗಿದ್ದರು. ಇದೀಗ ಮಳೆ ಒಂದಷ್ಟು ಕಡಿಮೆಯಾಗುತ್ತಿದ್ದು, ಇದರ ಮಧ್ಯೆ ಈಗ ಸಾಂಕ್ರಾಮಿಕ ರೋಗಗಳ ಭೀತಿಯೂ ಜನತೆಯನ್ನು ಕಾಡುತ್ತಿದೆ.
ಮಳೆಯಿಂದಾಗಿ ಬಹುತೇಕ ಕೆರೆಕಟ್ಟೆಗಳು ತುಂಬಿ ಹೋಗಿದ್ದು, ನಗರ ಪ್ರದೇಶಗಳಲ್ಲಿ ಒಳಚರಂಡಿ ವ್ಯವಸ್ಥೆ ಹಾಳಾಗಿರುವ ಪರಿಣಾಮ ನೀರು ಕಲುಷಿತಗೊಂಡಿದೆ. ಹೀಗಾಗಿ ಕಾಲರಾ, ಮಲೇರಿಯಾ, ಚಿಕೂನ್ ಗುನ್ಯಾ, ಡೆಂಗ್ಯೂ ಮೊದಲಾದ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ.
ಇದರ ಜೊತೆಗೆ ಶುದ್ಧ ಕುಡಿಯುವ ನೀರಿಗೂ ಸಹ ಸಂಕಷ್ಟ ಬಂದೊದಗಿದ್ದು ಸಾಂಕ್ರಾಮಿಕ ರೋಗಗಳ ಭೀತಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನತೆ ತಮ್ಮ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ದೂರ ಮಾಡಬಹುದಾಗಿದೆ.