alex Certify BIG NEWS: ಮಳೆ ಅವಾಂತರಕ್ಕೆ ಕುಸಿದ ಮನೆ ಗೋಡೆ; ಬಾಲಕ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಳೆ ಅವಾಂತರಕ್ಕೆ ಕುಸಿದ ಮನೆ ಗೋಡೆ; ಬಾಲಕ ದುರ್ಮರಣ

ಹಾಸನ: ರಾಜ್ಯಾದ್ಯಂತ ಮಳೆ ಅವಾಂತರಗಳು ಮುಂದುವರೆದಿದ್ದು, ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚೆನ್ನರಾಯ ಪಟ್ಟಣ ತಾಲೂಕಿನ ಭುವನಹಳ್ಳಿಯಲ್ಲಿ ನಡೆದಿದೆ.

13 ವರ್ಷದ ಪ್ರಜ್ವಲ್ ಮೃತ ಬಾಲಕ. ತಡರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಈ ದುರಂತ ಸಂಭವಿಸಿದೆ. ತಾತನ ಮನೆಗೆಂದು ಬಂದ ಬಾಲಕ ಮನೆ ಗೋಡೆ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

ಮನೆಯಲ್ಲಿದ್ದ ಮತ್ತೋರ್ವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...