ಬೆಂಗಳೂರು: ಮಸೀದಿಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳ ತೆರವಿಗೆ ಹಿಂದೂ ಪರ ಸಂಘಟನೆಗಳು ಏ.13ರ ಗಡವು ನೀಡಿದ್ದು, ಆ ಬಳಿಕ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿವೆ.
ರಾಜ್ಯಾದ್ಯಾಂತ ಆಜಾನ್ V/S ಭಜನೆ ಎನ್ನುವ ರೀತಿಯಲ್ಲಿ ಇದೀಗ ಹೊಸ ವಿವಾದ ಆರಂಭವಾಗಿದ್ದು, ಮಸೀದಿಗಳಲ್ಲಿನ ಧ್ವನಿವರ್ಧಕ ತೆಗೆಸುವಂತೆ ರಾಜ್ಯ ಸರ್ಕಾರಕ್ಕೆ ಹಿಂದೂ ಪರ ಸಂಘಟನೆಗಳು ಒತ್ತಾಯಿಸಿವೆ. ಈ ನಿಟ್ಟಿನಲ್ಲಿ ಏ.13ರವರೆಗೆ ಗಡುವು ನೀಡಲಾಗಿದ್ದು, ಅಂದು ಆಯಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಶ್ರೀರಾಮಸೇನೆ ಹಾಗೂ ಹಿಂದೂ ಪರ ಸಂಘಟನೆಗಳು ಮಸೀದಿಗಳಲ್ಲಿನ ಮೈಕ್ ತೆಗೆಯುವಂತೆ ಮನವಿ ಸಲ್ಲಿಸಲಿದೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದ್ದಾರೆ.
ಪಠ್ಯ ಪುಸ್ತಕದಲ್ಲಿ ವರದಕ್ಷಿಣೆ ಪ್ರಯೋಜನಗಳ ಪಟ್ಟಿ ; ರೊಚ್ಚಿಗೆದ್ದ ಟ್ವೀಟಿಗರು
ಒಂದು ವೇಳೆ ತೆರವುಗೊಳಿಸದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ. ಈಗಾಗಲೇ ಮಸೀದಿಗಳಲ್ಲಿನ ಧ್ವನಿವರ್ಧಕ ತೆರವಿಗೆ ಹೈಕೋರ್ಟ್ ಆದೇಶ ನೀಡಿದೆ. ಕೋರ್ಟ್ ಆದೇಶವನ್ನು ಪಾಲಿಸಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿ. ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕೋರ್ಟ್