ಚಿಕ್ಕಮಗಳೂರು: ಕೊಡಗು ಜಿಲ್ಲೆಗೆ ಭೇಟಿ ನೀಡಿದ ವೇಳೆ ಕಾರಿನ ಮೇಲೆ ಮೊಟ್ಟೆ ದಾಳಿ ನಡೆದ ಬೆನ್ನಲ್ಲೇ ಇದೀಗ ಚಿಕ್ಕಮಗಳೂರಿನಲ್ಲಿ ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಾರ್ಯಕರ್ತರು ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಚಿಕ್ಕಮಗಳೂರಿನ ಬಾಸಾಪುರದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಹಾತ್ಮಾ ಗಾಂಧೀಜಿಯವರನ್ನೇ ಕೊಂದವರು ನನ್ನನ್ನು ಬಿಡ್ತಾರಾ? ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ತಮಗೆ ಜೀವ ಬೆದರಿಕೆ ಭೀತಿ ಇರುವ ಬಗ್ಗೆ ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ.
ನಾನು ಸತ್ಯ ಹೇಳುವುದನ್ನು ಕೆಲವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಸಾವರ್ಕರ್ ಕ್ಷಮಾಪಣೆ ಪತ್ರ ಬರೆದುಕೊಟ್ಟು ಜೈಲಿನಿಂದ ಹೊರಬಂದರು. ಅವರ ಫೋಟೋ ಹಿಡಿದುಕೊಂಡು ವೀರ ಸಾವರ್ಕರ್ ಎನ್ನುವವರು ಇವರು. ಗಾಂಧಿಜೀಯವರನ್ನೇ ಕೊಂದವರು ನನ್ನನ್ನು ಬಿಡ್ತಾರಾ? ಗಾಂಧಿ ಕೊಂದವರನ್ನು ಬಿಜೆಪಿಯವರು ಪೂಜೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.