alex Certify BIG NEWS: ಮಹಾನಾಯಕ ಪ್ರಿಯಾಂಕ್ ಖರ್ಗೆ ಲೂಸ್ ಆಗಿ ಕಮೆಂಟ್ ಮಾಡಿದ್ದಾರೆ; ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಹಾನಾಯಕ ಪ್ರಿಯಾಂಕ್ ಖರ್ಗೆ ಲೂಸ್ ಆಗಿ ಕಮೆಂಟ್ ಮಾಡಿದ್ದಾರೆ; ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗಕ್ಕೆ 5000 ಕೋಟಿ ಅನುದಾನದ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಸರ್ಕಾರದ ಬಗ್ಗೆಯೂ ಮಹಾನಾಯಕ ಪ್ರಿಯಾಂಕ್ ಖರ್ಗೆ ಕಮೆಂಟ್ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಹೈದರಾಬಾದ್ ಕರ್ನಾಟಕದ ಅಭಿವೃದ್ಧಿ ಬಗ್ಗೆ ಕಾಳಜಿಯಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಹೈದರಾಬಾದ್ ಕರ್ನಾಟಕಕ್ಕೆ ನಾವು 5000 ಕೋಟಿ ಅನುದಾನ ಕೊಟ್ಟೆ ಕೊಡುತ್ತೇವೆ. ಅದಕ್ಕೆ ನಮಗೆ ಬದ್ಧತೆ ಇದೆ. ಜವಾಬ್ದಾರಿಯಿಂದಲೇ ಆ ಮಾತನ್ನು ನಾನು ಹೇಳಿದ್ದೇನೆ. ಕಳೆದ ಬಾರಿ ಬಜೆಟ್ ನಲ್ಲಿ 3000 ಕೋಟಿ ಕೊಟ್ಟಿದ್ದೆವು. ಬಜೆಟ್ ಹಣಕ್ಕೆ ಕ್ರಿಯಾ ಯೋಜನೆ ಕೂಡ ಆಗಿದೆ ಎಂದರು.

ಹೈದರಾಬಾದ್ ಕರ್ನಾಟಕದ ಅಭಿವೃದ್ಧಿ ಪ್ರಿಯಾಂಕ್ ಖರ್ಗೆ ಅವರಿಗೆ ಇಷ್ಟವಿಲ್ಲ ಎನಿಸುತ್ತದೆ. ಅದಕ್ಕೆ ಬಹಳ ಲೂಸ್ ಆಗಿ ಕಮೆಂಟ್ ಮಾಡುತ್ತಿದ್ದಾರೆ. ಈ ವಿಚಾರವಾಗಿ ಸುಮ್ಮನೇ ರಾಜಕೀಯ ಮಾಡುವುದು ಸರಿಯಲ್ಲ ಎಂದು ತಿರುಗೇಟು ನೀಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...