alex Certify BIG NEWS: ಮಹಾಮಳೆಗೆ ಮತ್ತೊಂದು ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಹಾಮಳೆಗೆ ಮತ್ತೊಂದು ಬಲಿ

ಹಾಸನ: ಹಾಸನ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಮಹಾಮಳೆಗೆ ಕಾಂಪೌಂಡ್ ಕುಸಿದು ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.

ಹಾಸನ ನಗರದ ಹರ್ಷಾಮಹಲ್ ರಸ್ತೆ ಬಳಿ ದುರಂತ ಸಂಭವಿಸಿದ್ದು, ಕಾಂಪೌಂಡ್ ಕುಸಿದು ಬಿದ್ದು ಬೀದಿಬದಿ ವ್ಯಾಪಾರಿ ಸಾವನ್ನಪ್ಪಿದ್ದಾರೆ. ವೆಂಕಟೇಶ್ ಮೃತ ವ್ಯಕ್ತಿ.

ರಾತ್ರಿ ಕಾಂಪೌಂಡ್ ಪಕ್ಕ ನಿದ್ದೆ ಮಾಡುತ್ತಿದ್ದ ವ್ಯಕ್ತಿ ಮೇಲೆ ಕಾಂಪೌಂಡ್ ಕುಸಿದು ಬಿದ್ದಿದ್ದು, ವ್ಯಕ್ತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಹಾಸನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ಭಾರಿ ಮಳೆಯಿಂದ ಹಳ್ಳದಲ್ಲಿ ಕೊಚ್ಚಿ ಹೋಗಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿದ್ದರು. ಈ ಘಟನೆ ಬೆನ್ನಲ್ಲೇ ಇದೀಗ ಜಿಲ್ಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...