ಮಂಗಳೂರು: ರಾಜ್ಯಾಧ್ಯಂತ ಭಾರಿ ಮಳೆಯಾಗುತ್ತಿದ್ದು, ಅದರಲ್ಲಿಯೂ ಕರಾವಳಿ ಜಿಲ್ಲೆಗಳು ವರುಣಾರ್ಭಟಕ್ಕೆ ತತ್ತರಿಸಿ ಹೋಗಿವೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು, ಹಳ್ಳಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಸೇತುವೆಗಳು, ರಸ್ತೆಗಳು ಜಲಾವೃತಗೊಂಡಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಮಳೆಯ ಆರ್ಭಟ ಜೋರಾಗಿದ್ದು, ನೇತ್ರಾವತಿ, ಕುಮರಧಾರಾ ನದಿಗಳು ಉಕ್ಕಿ ಹರಿಯುತ್ತಿದ್ದು, ಕುಮಾರಧಾರಾ ನದಿಯ ಅಬ್ಬರಕ್ಕೆ ಶ್ರೀ ಕ್ಷೇತ್ರ ಕುಕ್ಕೆಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ.
ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, ಕುಮರಧಾರಾ ಸ್ನಾನ ಘಟ್ಟ ಮುಳುಗಡೆಯಾಗಿದೆ. ಈ ಹಿನ್ನೆಲೆಯಲ್ಲಿ ನದಿ ತೀರಕ್ಕೆ ಹೋಗದಂತೆ ಭಕ್ತರಿಗೆ ಸೂಚಿಸಲಾಗಿದೆ.