ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದ ಮಹಾರಾಷ್ಟ್ರ ರಾಜಕಾರಣ ಈಗ ನಿರ್ಣಾಯಕ ಹಂತ ತಲುಪಿದ್ದು, ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ರಂಗ ಪ್ರವೇಶಿಸಿದ್ದಾರೆ. ಸರ್ಕಾರಕ್ಕೆ ಪತ್ರ ಬರೆದಿರುವ ರಾಜ್ಯಪಾಲರು ಪ್ರಸಕ್ತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ವಿವರಣೆ ಕೇಳಿದ್ದಾರೆ.
ಇದರ ಮಧ್ಯೆ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನೆ ಸಿದ್ಧತೆ ನಡೆಸಿದ್ದು, ಇವರಿಗೆ ಏಕನಾಥ್ ಶಿಂಧೆ ನೇತೃತ್ವದಲ್ಲಿ ಬಂಡಾಯ ಎದ್ದಿರುವ ಶಾಸಕರು ಸಹ ಬೆಂಬಲಿಸಲಿದ್ದಾರೆ ಎನ್ನಲಾಗಿದೆ.
ಒಂದೊಮ್ಮೆ ಬಹುಮತ ಸಾಬೀತುಪಡಿಸಲು ಉದ್ಧವ್ ಠಾಕ್ರೆ ಸರ್ಕಾರಕ್ಕೆ ರಾಜ್ಯಪಾಲರು ಸೂಚಿಸಿದರೆ ಸರ್ಕಾರ ಪತನಗೊಳ್ಳುವುದು ಬಹುತೇಕ ಖಚಿತವಾಗಿದೆ. ಹೀಗಾಗಿಯೇ ಮುಂದಿನ ಸರ್ಕಾರ ರಚಿಸಲು ಸಿದ್ಧವಾಗಿರುವ ಬಿಜೆಪಿ, ತನ್ನ ಪಕ್ಷದ ಶಾಸಕರು ಮುಂಬೈ ತೊರೆಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.