ನವದೆಹಲಿ: ಮಹಾರಾಷ್ಟ್ರ ಸರ್ಕಾರದ ರಾಜಕೀಯ ಬಿಕ್ಕಟ್ಟು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಬಂಡಾಯ ಶಾಸಕರನ್ನು ಅನರ್ಹಗೊಳಿಸಿದ್ದ ಸ್ಪೀಕರ್ ನಡೆ ಪ್ರಶ್ನಿಸಿ ಏಕನಾಥ್ ಶಿಂಧೆ ಬಣ ಸರ್ವೋಚ್ಛನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ.
ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ಈ ನಡುವೆ ಸಚಿವ ಏಕನಾಥ್ ಶಿಂಧೆ ಬಣ ಮಾರಾಷ್ಟ್ರ ಮಹಾ ವಿಕಾಸ ಅಘಾಡಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಅಧಿಕೃತವಾಗಿ ವಾಪಸ್ ಪಡೆದಿದೆ.
ಮದುವೆಯಾಗಿ ಎರಡೇ ತಿಂಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ ಬಾಲಿವುಡ್‌ನ ಈ ಸ್ಟಾರ್ ಜೋಡಿ
ಸರ್ಕಾರಕ್ಕೆ ನೀಡಿದ್ದ 38 ಶಾಸಕರ ಬೆಂಬಲ ವಾಪಸ್ ಪಡೆದಿರುವುದಾಗಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವ 163 ಪುಟಗಳ ವರದಿಯಲ್ಲಿ ಏಕನಾಥ್ ಶಿಂಧೆ ಉಲ್ಲೇಖಿಸಿದ್ದಾರೆ. ಈ ಮೂಲಕ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದಿಂದ ಶಿಂಧೆ ಬಣ ಅಧಿಕೃತವಾಗಿ ಹೊರಬಂದಂತಾಗಿದೆ.