ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಿತ್ತಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಖಡಕ್ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಈಗಾಗಲೇ ಇಬ್ಬರು ಅಧಿಕಾರಿಗಳಿಗೆ ನೋಟೀಸ್ ನೀಡಲಾಗಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಅಧಿಕಾರಿಗಳಿಗೆ ಈಗಾಗಲೇ ಲಿಖಿತ ರೂಪದಲ್ಲಿ ಸೂಚಿಸಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ನೋಟೀಸ್ ಜಾರಿ ಮಾಡಿದ್ದಾರೆ ಎಂದರು.
ರೂಪಾ ಹಾಗೂ ರೋಹಿಣಿ ಸಿಂಧೂರಿಗೆ ಸಿಎಸ್ ಸೂಚನೆ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಏನು ಕ್ರಮ ಆಗಬೆಕೋ ಅದು ಆಗುತ್ತೆ ಎಂದು ಹೇಳಿದ್ದಾರೆ.