alex Certify BIG NEWS: ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ; ಕಾಮುಕ ಡಾಕ್ಟರ್ ರತ್ನಾಕರ್ ವಿರುದ್ಧ ಎಫ್ಐಆರ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ; ಕಾಮುಕ ಡಾಕ್ಟರ್ ರತ್ನಾಕರ್ ವಿರುದ್ಧ ಎಫ್ಐಆರ್ ದಾಖಲು

ಮಂಗಳೂರು: ಆಸ್ಪತ್ರೆಯಲ್ಲಿಯೇ ಮಹಿಳಾ ಸಿಬ್ಬಂದಿಗಳ ಜೊತೆ ಚೆಲ್ಲಾಟವಾಡಿ, ಅಶ್ಲೀಲವಾಗಿ ವರ್ತಿಸಿದ್ದ ದಕ್ಷಿಣ ಕನ್ನಡ ಜಿಲ್ಲೆ ಆರೋಗ್ಯ ವೈದ್ಯಾಧಿಕಾರಿ ಡಾ. ರತ್ನಾಕರ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ.

ಕಾಮುಕ ಡಾಕ್ಟರ್ ರತ್ನಾಕರ್ ಮಹಿಳಾ ಸಿಬ್ಬಂದಿಗಳ ಜೊತೆ ಆಸ್ಪತ್ರೆಯಲ್ಲಿಯೇ ಅಸಭ್ಯವಾಗಿ ವರ್ತಿಸಿ, ಕಿರುಕುಳ ನೀಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪ್ರಕರಣ ಸಂಬಂಧ ಇದೀಗ ಕಾಮುಕ ಡಾಕ್ಟರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಡಾಕ್ಟರ್ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗಿದೆ. ಘಟನೆ ಸಂಬಂಧ ನಾಲ್ವರು ಮಹಿಳೆಯರು ಇಂದು ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ಮಾಹಿತಿ ನೀಡಲಿದ್ದು, ಅವರಿಂದ ವಿವರಣೆ ಪಡೆದ ಬಳಿಕ ಡಾ. ರತ್ನಾಕರ್ ನನ್ನು ಬಂಧಿಸಲಾಗುವುದು. ಘಟನೆ ಕುರಿತು ಸಾಕಷ್ಟು ಪೂರಕ ಸಾಕ್ಷ್ಯ ದೊರೆತಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...