alex Certify BIG NEWS: ಮಹಿಳೆ ಜೊತೆ ಅಸಭ್ಯ ವರ್ತನೆ; ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಹಿಳೆ ಜೊತೆ ಅಸಭ್ಯ ವರ್ತನೆ; ಆರೋಪಿ ಅರೆಸ್ಟ್

ಬೆಂಗಳೂರು: ಮಹಿಳೆ ಜೊತೆ ಅಸಭ್ಯ ವರ್ತನೆ ತೋರಿದ್ದ ಆರೋಪಿಯನ್ನು ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸರು ಬಂಧಿಸಿದ್ದಾರೆ.

ಸತೀಶ್ ಬಂಧಿತ ಆರೋಪಿ. ಒರಾಯನ್ ಮಾಲ್ ಬಳಿ ಕರೆದಿದ್ದ ಆರೋಪಿ ಸತೀಶ್, ಮಹಿಳೆಯ ಜತೆ ಅಸಭ್ಯವಾಗಿ ವರ್ತಿಸಿದ್ದ. ಅಲ್ಲದೇ ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾಗಿ ಸಂತ್ರಸ್ತ ಮಹಿಳೆ ಸುಬ್ರಹ್ಮಣ್ಯಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

ಆರೋಪಿ ತನ್ನ ಬಳಿ ಇದ್ದ ಹಣ, ಚಿನ್ನಾಭರಣಗಳನ್ನು ದೋಚಿದ್ದು ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಮಹಿಳೆ ದೂರಿದ್ದಳು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈಗ ಆರೋಪಿ ಸತೀಶ್ ನನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...