alex Certify BIG NEWS: ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಬಿಜೆಪಿ ಟಿಕೆಟ್ ಮಿಸ್….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಬಿಜೆಪಿ ಟಿಕೆಟ್ ಮಿಸ್….?

ನವದೆಹಲಿ: ಅಥಣಿಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿಯವರಿಗೆ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಪರೋಕ್ಷ ಸುಳಿವು ನೀಡಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಅಥಣಿ ಟಿಕೆಟ್ ವಿಚಾರವಾಗಿ, ಲಕ್ಷ್ಮಣ ಸವದಿ ಅಥಣಿ ಟಿಕೆಟ್ ಕೇಳಿರುವುದು ನಿಜ. ಆದರೆ ಬಿಜೆಪಿ ಸರ್ಕಾರ ರಚನೆ ವೇಳೆ ಮಹೇಶ್ ಕುಮಟಳ್ಳಿ ಸಹಾಯ ಮಾಡಿದ್ದಾರೆ. ಸವದಿ ಜೊತೆ ನಾನು ಈಗಾಗಲೇ ಮಾತನಾಡಿದ್ದೇನೆ ಎಂದು ಹೇಳಿದರು.

ಲಕ್ಷ್ಮಣ್ ಸವದಿ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಆತುರದ ನಿರ್ಧಾರ ಕೈಗೊಳ್ಳಬೇಡಿ ಎಂದು ಹೇಳಿದ್ದೇನೆ. ಮತ್ತೊಮ್ಮೆ ಅವರ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ. ಈ ಮೂಲಕ ಪರೋಕ್ಷವಾಗಿ ಮಹೇಶ್ ಕುಮಟಳ್ಳಿಗೆ ಬಿಜೆಪಿ ಟಿಕೆಟ್ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...