
ಬೆಂಗಳೂರು: ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಇಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿದ್ದಾರೆ.
ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಫಾರೂಕ್ ಅಬ್ದುಲ್ಲಾ, ದೇವೇಗೌಡರನ್ನು ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದರು.
ಈ ವೇಳೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಬಿ.ಎಂ. ಫಾರೂಕ್, ರೋಷನ್ ಬೇಗ್ ಮೊದಲಾದವರು ಉಪಸ್ಥಿತರಿದ್ದರು.