alex Certify BIG NEWS: ಮಾಜಿ ಶಾಸಕರಿಬ್ಬರು ಇಂದು ಕಾಂಗ್ರೆಸ್ ಗೆ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಶಾಸಕರಿಬ್ಬರು ಇಂದು ಕಾಂಗ್ರೆಸ್ ಗೆ ಸೇರ್ಪಡೆ

ಚುನಾವಣೆ ಸಮೀಪಿಸುತಿದ್ದಂತೆಯೇ ಪಕ್ಷಾಂತರ ಪರ್ವ ಬಲು ಜೋರಾಗಿ ನಡೆದಿದ್ದು, ಇಬ್ಬರು ಮಾಜಿ ಶಾಸಕರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಕೊಳ್ಳೇಗಾಲ ಕ್ಷೇತ್ರದ ಮಾಜಿ ಶಾಸಕ ಹಾಗೂ ಬಿಜೆಪಿ ಎಸ್ಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಜಿ.ಎಸ್. ನಂಜುಂಡಸ್ವಾಮಿ ಹಾಗೂ ದೊಡ್ಡಬಳ್ಳಾಪುರ ಕ್ಷೇತ್ರದ ಮಾಜಿ ಶಾಸಕ ಜೆ. ನರಸಿಂಹಸ್ವಾಮಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಕೊಳ್ಳೇಗಾಲ ಮೀಸಲು ಕ್ಷೇತ್ರದಿಂದ ಹಾಲಿ ಶಾಸಕ ಮಹೇಶ್ ಅವರಿಗೆ ಬಿಜೆಪಿ ಟಿಕೆಟ್ ದೊರೆಯುವುದು ಖಚಿತವಾಗಿರುವುದರಿಂದ ನಂಜುಂಡಸ್ವಾಮಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಇನ್ನು ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪುತ್ರ ಜೆ. ನರಸಿಂಹ ಸ್ವಾಮಿ ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಗೆ ಬರುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...