ಬೆಂಗಳೂರು: ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರ ಆಂಜನೇಯ ವಜ್ಜಲ್ ವಿರುದ್ಧ ಬೆಂಗಳೂರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಆಂಜನೇಯ ವಜ್ಜಲ್ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿಕ್ರಮ್ ರೈ ಎಂಬುವವರು ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಆಧರಿಸಿ ಇದೀಗ ಪೊಲೀಸರು ಆಂಜನೇಯ ವಜ್ಜಲ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯ: ಬಿಜೆಪಿಯಿಂದ ಸೇವಾ ಕಾರ್ಯ
ಮಾನಪ್ಪ ವಜ್ಜಲ್ ರಾಯಚೂರು ಜಿಲ್ಲೆ ಲಿಂಗಸಗೂರು ಕ್ಷೇತ್ರದ ಬಿಜೆಪಿ ಮಾಜಿ ಶಾಸಕರಾಗಿದ್ದು, ಅವರ ಪುತ್ರ ಆಂಜನೇಯ ನಿನ್ನೆ ರಾತ್ರಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾಗಿ ವಿಕ್ರಮ್ ರೈ ದೂರಿದ್ದಾರೆ.