ಅರಸೀಕೆರೆ ಕ್ಷೇತ್ರದ ಮಾಜಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 9 ರಂದು ಅವರು ತಮ್ಮ ಸ್ವಕ್ಷೇತ್ರದಲ್ಲಿ ಬೃಹತ್ ಸಮಾವೇಶ ನಡೆಸಲಿದ್ದು, ಈ ವೇಳೆ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗಲಿದ್ದಾರೆ.
ಜೆಡಿಎಸ್ ಶಾಸಕರಾಗಿದ್ದ ಶಿವಲಿಂಗೇಗೌಡ ಭಾನುವಾರದಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅದನ್ನು ಇಂದು ಅಂಗೀಕರಿಸಲಾಗಿದೆ. ಈ ಮೊದಲು ಕೆಪಿಸಿಸಿ ಕಚೇರಿಯಲ್ಲಿ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಗೆ ನಿರ್ಧರಿಸಿದ್ದರು.
ಆದರೆ ತಮ್ಮ ಸ್ವಕ್ಷೇತ್ರ ಅರಸೀಕೆರೆಯಲ್ಲಿ ಶಕ್ತಿ ಪ್ರದರ್ಶನ ಮಾಡುವ ಮೂಲಕ ಕಾಂಗ್ರೆಸ್ ಸೇರ್ಪಡೆಗೆ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಶಿವಲಿಂಗೇಗೌಡ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವುದು ಖಚಿತವಾಗಿದ್ದು, ಏಪ್ರಿಲ್ 9ರಂದು ನಡೆಯುವ ಸಮಾವೇಶದಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ.