alex Certify BIG NEWS: ಮಾಜಿ ಸಂಸದ ಮುದ್ದ ಹನುಮೇಗೌಡ, ನಟ ಶಶಿಕುಮಾರ್ BJPಗೆ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಸಂಸದ ಮುದ್ದ ಹನುಮೇಗೌಡ, ನಟ ಶಶಿಕುಮಾರ್ BJPಗೆ ಸೇರ್ಪಡೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಆರಂಭವಾಗಿದ್ದು, ಕಾಂಗ್ರೆಸ್ ನ ಹಲವು ನಾಯಕರು ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಂಸದ ಮುದ್ದ ಹನುಮೇಗೌಡ, ನಟ ಶಶಿಕುಮಾರ್, ನಿವೃತ್ತ ಐ ಎ ಎಸ್ ಅಧಿಕಾರಿ ಅನಿಲ್ ಕುಮಾರ್, ಸೇವಾದಳ ರಾಜ್ಯ ಉಪಾಧ್ಯಕ್ಷ ಹನುಮಂತರಾವ್ ಜವಳಿ, ರಮೇಶ್ ಮುನಿಯಪ್ಪ, ವೆಂಕಟಾಚಲಯ್ಯ ಸೇರಿದಂತೆ ಹಲವು ನಾಯಕರು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದರು. ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಬಿಜೆಪಿ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ. ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಉಪಾಧ್ಯಕ್ಷ್ಯ ನಿರ್ಮಲ್ ಕುಮಾರ್ ಸುರಾನ, ಸಚಿವರು, ಶಾಸಕರು ಮೊದಲಾದವರು ಉಪಸ್ಥಿತರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...