ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದ ಕಾರಣಕ್ಕೆ ನಿರಾಳರಾಗಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ನ್ಯಾಯಾಲಯಕ್ಕೆ ಸಲ್ಲಿಸಿರುವ ಬಿ ರಿಪೋರ್ಟ್ ಪ್ರಶ್ನಿಸಿ ಸಂತೋಷ್ ಪಾಟೀಲ್ ಅವರ ಸಹೋದರ ಪ್ರಶಾಂತ್ ಪಾಟೀಲ್, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ಉಡುಪಿ ಪೊಲೀಸರು, ಪ್ರಭಾವಕ್ಕೊಳಗಾಗಿ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಅವರು ನಿಷ್ಪಕ್ಷಪಾತವಾಗಿ ತನಿಖೆ ಮಾಡಿಲ್ಲ. ಹೀಗಾಗಿ ಸಹೋದರನ ಆತ್ಮಹತ್ಯೆ ಪ್ರಕರಣವನ್ನು ಮತ್ತೊಂದು ತನಿಖಾ ಸಂಸ್ಥೆಗೆ ವಹಿಸುವಂತೆ ಅವರು ಮನವಿ ಮಾಡಿದ್ದಾರೆ.