ಹಾವೇರಿ: ಮಾಜಿ ಶಿಕ್ಷಣ ಸಚಿವ, ಬ್ಯಾಡಗಿ ಕ್ಷೇತ್ರದ ಧುರೀಣ ಡಾ.ಹೆಗ್ಗಪ್ಪ ದೇಶಪ್ಪ ಲಮಾಣಿ ವಿಧಿವಶರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದೇಶಪ್ಪ ಲಮಾಣಿ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ದೇಶಪ್ಪ ಲಮಾಣಿ ಕರ್ನಾಟಕ ವಿಶ್ವವಿದ್ಯಾಲಯದ ಕಲಾ ಮಹಾವಿದ್ಯಾಲಯದ ಮುಖ್ಯ ಪ್ರಾಧ್ಯಾಪಕರಾಗಿಯೂ ಕಾರ್ಯನಿರ್ವಹಿಸಿದ್ದರು. ಹಿರಿಯ ನಾಯಕನ ಅಗಲಿಕೆಗೆ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.
ಬ್ಯಾಡಗಿ ಕ್ಷೇತ್ರದಿಂದ 1983 ಹಾಗೂ 1989ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ವೀರಪ್ಪ ಮೊಯ್ಲಿ ಮುಖ್ಯಮಂತ್ರಿಯಾಗಿದ್ದಾಗ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು.