ಕಿಡ್ನಾಪ್ ಪ್ರಕರಣದಲ್ಲಿ ಎಸ್ಐಟಿ ತಂಡದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಅಂತ್ಯವಾಗಿದ್ದು, ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಆರಂಭವಾಗಿದೆ.
ನ್ಯಾಯಮೂರ್ತಿ ರವೀಂದ್ರ ಬಿ ಕಟ್ಟಿಮನಿ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದ್ದು, ರೇವಣ್ಣ ಪರ ಸಿ.ವಿ. ನಾಗೇಶ್ ವಕಾಲತ್ತು ವಹಿಸಿದ್ದರೆ, ಎಸ್ಐಟಿ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಜಗದೀಶ್ ವಾದ ಮಂಡನೆ ಮಾಡುತ್ತಿದ್ದಾರೆ.
ವಿಚಾರಣೆ ಇನ್ನೂ ಮುಗಿದಿಲ್ಲ ಹಾಗಾಗಿ ಇನ್ನಷ್ಟು ದಿನಗಳ ಕಾಲ ಕಸ್ಟಡಿಗೆ ನೀಡಬೇಕೆಂದು ಎಸ್ಐಟಿ ಪರ ವಕೀಲರು ನ್ಯಾಯಾಧೀಶರಿಗೆ ಮನವಿ ಮಾಡಿದ್ದು, ಹೀಗಾಗಿ ರೇವಣ್ಣ ಅವರಿಗೆ ಇಂದು ಜಾಮೀನು ಸಿಗುತ್ತಾ ಅಥವಾ ಬಂಧನ ಮುಂದುವರೆಯುತ್ತಾ ಎಂಬ ಕುತೂಹಲ ಮನೆ ಮಾಡಿದೆ.