ನವದೆಹಲಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣದ ತನಿಖೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಕುಟುಂಬದ ವಿರುದ್ಧ ಕೇಳಿ ಬಂದಿದ್ದ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಯಡಿಯೂರಪ್ಪ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠ ಯಡಿಯೂರಪ್ಪ ಜನಪ್ರತಿನಿಧಿಯಾಗಿರುವುದರಿಂದ ಯಡಿಯೂರಪ್ಪ ವಿರುದ್ಧ ತನಿಖೆಗೆ ಮಧ್ಯಂತರ ತಡೆ ನೀಡಿದೆ. ಬಿ.ವೈ.ವಿಜಯೇಂದ್ರ ಸೇರಿದಂತೆ ಉಳಿದವರ ತನಿಖೆ ಮುಂದುವರೆಸಬಹುದು ಎಂದು ಆದೇಶ ನೀಡಿದೆ.