alex Certify ಮಾಜಿ ಸಿಎಂ ಬೊಮ್ಮಾಯಿ – ಶಾಮನೂರು ಶಿವಶಂಕರಪ್ಪ ರಹಸ್ಯ ಸಭೆ; ಹೊಂದಾಣಿಕೆ ರಾಜಕಾರಣ ಆರೋಪ ಬೆನ್ನಲ್ಲೇ ಕುತೂಹಲ ಮೂಡಿಸಿದ ಉಭಯ ಪಕ್ಷಗಳ ನಾಯಕರ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ ಬೊಮ್ಮಾಯಿ – ಶಾಮನೂರು ಶಿವಶಂಕರಪ್ಪ ರಹಸ್ಯ ಸಭೆ; ಹೊಂದಾಣಿಕೆ ರಾಜಕಾರಣ ಆರೋಪ ಬೆನ್ನಲ್ಲೇ ಕುತೂಹಲ ಮೂಡಿಸಿದ ಉಭಯ ಪಕ್ಷಗಳ ನಾಯಕರ ಭೇಟಿ

ದಾವಣಗೆರೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರನ್ನು ರಹಸ್ಯವಾಗಿ ಭೇಟಿಯಾಗಿ ಚರ್ಚೆ ನಡೆಸಿರುವುದು ರಾಜ್ಯ ರಾಜಕಾರಣಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ದಾವಣಗೆರೆಯ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿಯ ಖಾಸಗಿ ರೆಸಾರ್ಟ್ ನಲ್ಲಿ ನಿನ್ನೆ ರಾತ್ರಿ ಮಾಜಿ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರನ್ನು ಭೇಟಿಯಾಗಿದ್ದಾರೆ. ಸುಮಾರು 25 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣದ ಬಗ್ಗೆ ಸ್ವತಃ ಬಿಜೆಪಿ ನಾಯಕರೇ ಆರೋಪಿಸುತ್ತಿದ್ದಾರೆ. ನಿನ್ನೆ ದಾವಣಗೆರೆಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಹೊಂದಾಣಿಕೆ ರಾಜಕಾರಣ ವಿಚಾರವಾಗಿ ಕೆಲ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಮಾಜಿ ಸಿಎಂ ಬೊಮ್ಮಾಯಿ, ಶಾಮನೂರು ಶಿವಶಂಕರಪ್ಪ ಭೇಟಿಯಾಗಿ ರಹಸ್ಯ ಸಭೆ ನಡೆಸಿರುವುದು ಅಚ್ಚರಿಗೆ ಕಾರಣವಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...