alex Certify BIG NEWS: ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೆ ಸಂಕಷ್ಟ; FIR ದಾಖಲಿಸಿ ತನಿಖೆಗೆ ಆದೇಶಿಸಿದ ಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೆ ಸಂಕಷ್ಟ; FIR ದಾಖಲಿಸಿ ತನಿಖೆಗೆ ಆದೇಶಿಸಿದ ಕೋರ್ಟ್

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿದೆ.

ಯಡಿಯೂರಪ್ಪ ಹಾಗೂ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಕಳೆದ ವಾರ ಕೋರ್ಟ್ ಆದೇಶ ನೀಡಿತ್ತು. ಇಂದು ನಡೆದ ವಿಚಾರಣೆಯಲ್ಲಿ ಕೋರ್ಟ್ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ಗೆ ಆದೇಶ ನೀಡಿದೆ. ಅಲ್ಲದೇ ನವೆಂಬರ್ 2ರೊಳಗೆ ಅಂತಿಮ ವರದಿ ಸಲ್ಲಿಸುವಂತೆ ಸೂಚಿಸಿದೆ.

ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಶಶಿಧರ ಮರಡಿ, ಸಂಜಯಶ್ರೀ, ಚಂದ್ರಕಾಂತ ರಾಮಲಿಂಗಮ್, ಎಸ್.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ಕೆ.ರವಿ, ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಭ್ರಷ್ಟಾಚಾರ ಆರೋಪದಡಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಿಂ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ಇದೀಗ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆಯುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...