ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನದ ಚರ್ಚೆ ತಾರಕಕ್ಕೇರಿರುವ ಬೆನ್ನಲ್ಲೇ ಸಿ ಎಲ್ ಪಿ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯಗೆ ಪರೋಕ್ಷವಾಗಿ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬೇರೆ ಪಕ್ಷದಿಂದ ಬಂದು, ಗುಂಪು ಕಟ್ಟಿ ಕಾಂಗ್ರೆಸ್ ಹಾಳು ಮಾಡಬೇಡಿ ಎಂದು ಟಾಂಗ್ ನೀಡಿದ್ದಾರೆ.
SHOCKING NEWS: ಹುಟ್ಟುಹಬ್ಬದ ದಿನವೇ ಆತ್ಮಹತ್ಯೆಗೆ ಶರಣಾದ ಯುವಕ
ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಸಿಎಂ ಸ್ಥಾನದ ಬಗ್ಗೆ ಚರ್ಚೆಯಾಗಲಿ, ಬೇರೆ ಯಾವುದೇ ವಿಚಾರವಾಗಲಿ ಪಕ್ಷದಲ್ಲಿ ಯಾವುದೇ ಕಾರಣಕ್ಕೂ ಗೊಂದಲವಾಗಬಾರದು. ಬೇರೆ ಪಕ್ಷದಿಂದ ಬಂದು ಇಲ್ಲಿ ಗುಂಪುಗಾರಿಕೆ ಬೇಡ. ನಾನು ಒಂದು ಹಂತದವರೆಗೆ ನೋಡುತ್ತೇನೆ ಅಷ್ಟೆ. ಪಕ್ಷ ಪೂಜೆ ಮಾಡಿ ಆದರೆ ವ್ಯಕ್ತಿ ಪೂಜೆ ಬೇಡ ಎಂದು ಕಾಂಗ್ರೆಸ್ ನಾಯಕರಿಗೆ ಕಿವಿಮಾತು ಹೇಳಿದ್ದಾರೆ.