ಕೋಲಾರ: ಪಂಚರತ್ನ ರಥಯಾತ್ರೆ ಹಿನ್ನೆಲೆಯಲ್ಲಿ ಕೋಲಾರಕ್ಕೆ ತೆರಳಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಹೆಲಿಕಾಪ್ಟರ್ ನ್ನು ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಶಿನಗೇನಹಳ್ಳಿ ಹೆಲಿಪ್ಯಾಡ್ ಗೆ ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರ ಹೆಲಿಕಾಪ್ಟರ್ ನ್ನು ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾಧಿಕಾರಿಗಳು ರಾಜಕೀಯ ನಾಯಕರು, ಬೆಂಬಲಿಗರ ವಾಹನಗಳ ಮೇಲೆ ನಿಗಾ ವಹಿಸಿದ್ದು, ಚುನಾವಣಾ ಅಕ್ರಮ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಹೆಲಿಕಾಪ್ಟರ್ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.