alex Certify BIG NEWS: ಮಾಜಿ ಸಿಎಂ ಹೆಚ್.ಡಿ.ಕೆ.ಪರ ಸಂಸದ ಪ್ರತಾಪ್ ಸಿಂಹ ಬ್ಯಾಟಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಸಿಎಂ ಹೆಚ್.ಡಿ.ಕೆ.ಪರ ಸಂಸದ ಪ್ರತಾಪ್ ಸಿಂಹ ಬ್ಯಾಟಿಂಗ್

ಮೈಸೂರು: ಕೆ.ಆರ್.ಎಸ್. ಡ್ಯಾಂನಲ್ಲಿ ಯಾವುದೇ ಬಿರುಕು ಬಿಟ್ಟಿಲ್ಲ. ಈ ಬಗ್ಗೆ ನಾನೂ ಕೂಡ ಅಧಿಕಾರಿಗಳ ಜೊತೆ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದೇನೆ. ಇದೊಂದು ರಾಜಕೀಯವಷ್ಟೇ ಎಂದು ಹೇಳುವ ಮೂಲಕ ಸಂಸದ ಪ್ರತಾಪ್ ಸಿಂಹ, ಸಂಸದೆ ಸುಮಲತಾಗೆ ಪರೋಕ್ಷ ಟಾಂಗ್ ನೀಡಿದ್ದಾರೆ.

BIG NEWS: ಸುಮಲತಾ ‘ನಟೋರಿಯಸ್’ಸಂಸದೆ; ದೇಶದ್ರೋಹಿ ಎಂಬುದನ್ನು ಸಾಬೀತು ಮಾಡಿದ್ದಾರೆ; ಶಾಸಕ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಈ ಹಿಂದೆ ಸುಮಲತಾ ಮೈಸೂರು-ಬೆಂಗಳೂರು ದಶಪಥ ರಸ್ತೆ ಕಾಮಗಾರಿಗೂ ಅಡ್ಡಿ ಮಾಡಿದರು. ಸುಳ್ಳು ನೆಪಗಳನ್ನು ಹೇಳಿಕೊಂಡು ಕೆಲಸಕ್ಕೆ ತೊಂದರೆ ಮಾಡಿದರು. ಈಗ ಇಂತಹ ಹೇಳಿಕೆಗಳನ್ನು ನೀಡುತ್ತಾ ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...