ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಉಪ ಚುನಾವಣೆ ವಿಚಾರವಾಗಿ ಚರ್ಚೆ ನಡೆಸಿದರು.
ಬೆಂಗಳೂರಿನ ಕೆ.ಕೆ.ರಸ್ತೆಯಲ್ಲಿರುವ ಕಾವೇರಿ ನಿವಾಸದಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ, ವಿಜಯದಶಮಿ ಹಬ್ಬದ ಶುಭ ಕೋರಿದರು. ಬಳಿಕ ಹಾನಗಲ್, ಸಿಂದಗಿ ಕ್ಷೇತ್ರಗಳ ಉಪಚುನಾವಣೆ ಪ್ರಚಾರದ ವಿಚಾರವಾಗಿ ಚರ್ಚೆ ನಡೆಸಿದರು.
ಎದೆ ನಡುಗಿಸುತ್ತೆ ಸೈನಿಕರು ಮಾಡಿರುವ ಸಾಹಸದ ವಿಡಿಯೋ
ಬಿ.ಎಸ್. ಯಡಿಯೂರಪ್ಪ ಅಕ್ಟೋಬರ್ 20ರ ಬಳಿಕ ಉಪಚುನಾವಣಾ ಅಖಾಡದಲ್ಲಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಬಿ.ಎಸ್.ವೈ. ಭೇಟಿ ಬಳಿಕ ಮಾತನಾಡಿದ ಸಿಎಂ, ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯ ತಿಳಿಸಿದರು. ಯಡಿಯೂರಪ್ಪ ಅವರನ್ನು ಭೇಟಿಯಾಗಿ ದಸರಾ ಶುಭಾಶಯ ಕೋರಿ ಆಶೀರ್ವಾದ ಪಡೆದಿದ್ದೇನೆ. ಮೈಸೂರಿನಲ್ಲಿ ನಡೆಯುವ ದಸರಾ ಮಹೋತ್ಸವ ಕಾರ್ಯಕ್ರಮದಲ್ಲಿ ಇಂದು ಭಾಗಿಯಾಗುತ್ತಿದ್ದೇನೆ ಎಂದು ಹೇಳಿದರು.