alex Certify BIG NEWS: ಮಾಜಿ ಸಿಎಂ BSY ಭೇಟಿಯಾದ ಸಿಎಂ ಬೊಮ್ಮಾಯಿ; ಕುತೂಹಲ ಮೂಡಿಸಿದ ಚರ್ಚೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಸಿಎಂ BSY ಭೇಟಿಯಾದ ಸಿಎಂ ಬೊಮ್ಮಾಯಿ; ಕುತೂಹಲ ಮೂಡಿಸಿದ ಚರ್ಚೆ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ, ಅಮಿತ್ ಶಾ ಅವರೊಂದಿಗಿನ ಮಾತುಕತೆಯ ಬಗ್ಗೆ ಸಮಾಲೋಚನೆ ನಡೆಸಿದರು.

ಬಿ ಎಸ್ ವೈ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಮೇ 14ರಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಸಭೆಯಲ್ಲಿ ವಿಧಾನ ಪರಿಷತ್ ಚುನಾವಣೆ, ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯಲಿದೆ ಎಂದರು.

ಇನ್ನು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಒಬಿಸಿ ಮೀಸಲಾತಿ ಬಗ್ಗೆ ಈಗಾಗಲೇ ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ. ಕೋರ್ಟ್ ಮೊರೆ ಹೋಗಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹಳೇ ಒಬಿಸಿ ಮೀಸಲಾತಿ ಕೇಳಿದ್ದೇವೆ. ಬಹುತೇಕವಾಗಿ ಅವಕಾಶ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...