alex Certify BIG NEWS: ಮಾಜಿ ಸಿಎಂ HDK ಬೆಂಗಾವಲು ವಾಹನ ಅಪಘಾತ; ಮೂವರಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಸಿಎಂ HDK ಬೆಂಗಾವಲು ವಾಹನ ಅಪಘಾತ; ಮೂವರಿಗೆ ಗಂಭೀರ ಗಾಯ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಬೆಂಗಾವಲು ಪಡೆ ವಾಹನ ಅಪಘಾತಕ್ಕೀಡಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ನ ತಿಪ್ಪೂರು ಬಳಿ ನಡೆದಿದೆ.

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನಿನ್ನೆ ಮಂಗಳೂರಿಗೆ ತೆರಳಿದ್ದರು. ಮಂಗಳೂರಿನಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಹೆಚ್.ಡಿ.ಕೆ. ಅವರ ಬೆಂಗಾವಲು ವಾಹನ ಕುಣಿಗಲ್ ಬಳಿ ಅಪಘಾತಕ್ಕೀಡಾಗಿದೆ. ನಿನ್ನೆ ತಡರಾತ್ರಿ 1 ಗಂಟೆಗೆ ಈ ಅಪಘಾತ ಸಂಭವಿಸಿದ್ದು, ಎಸ್ಕಾರ್ಟ್ ನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪೊಲೀಸ್ ಸಿಬ್ಬಂದಿ ಮಹೇಶ್, ಆನಂದ್, ಹರೀಶ್ ಎಂಬುವವರು ಗಾಯಗೊಂಡಿದ್ದು, ಗಾಯಾಳು ಸಿಬ್ಬಂದಿಗಳನ್ನು ಆದಿಚುಂಚನಗಿರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಮೃತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...